ಹಣ್ಣು ಕೊಂಬುವ ಬನ್ನಿರಿ
ಕೀರ್ತನಕಾರರು : ಕನಕದಾಸರು
ರಾಗ : ಶಂಕರಾಭರಣ
ತಾಳ : ಅಟ್ಟ
ಹಣ್ಣು ಕೊಂಬುವ ಬನ್ನಿರಿ ಹರಿದಾಸರು
ಹಣ್ಣು ಕೊಂಬುವ ಬನ್ನಿರಿ
ಚಿನ್ನ ಬಾಲಕೃಷ್ಣನೆಂಬ
ಕನ್ನೆಗೊನೆಬಾಳೆಹಣ್ಣು ||ಪ||
ಸುತ್ತೇಳು ಲೋಕದಿ ಸುರರು ಬಿತ್ತಿದ ಹಣ್ಣು
ಭಕ್ತರ ಬಾಯೊಳು ನೆನೆವ ಹಣ್ಣು
ಅರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆ
ನಿತ್ಯ ಮಾಧವನೆಂಬ ಅಚ್ಚಮಾವಿನ ಹಣ್ಣು ||೧||
ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣು
ನಿಜಮುನಿಗಳಿಗೆ ತೋರಿಸಿದ ಹಣ್ಣು
ತ್ರಿಜಗವಂದಿತ ಪಾಲ್ಗಡಲೊಡೆಯನೆ ಹಣ್ಣು
ಸುಜನಭಕ್ತರೆಲ್ಲ ಕೊಳ್ಳಬನ್ನಿರಿ ಹಣ್ಣು ||೨||
ತುರುವ ಕಾಯ್ದ ಹಣ್ಣು ಉರಗನ ತುಳಿದಾ ಹಣ್ಣು
ಕರೆದರೆ ಕಂಬದೊಳು ಓಯೆಂಬ ಹಣ್ಣು
ಮರುಗುವ ಧ್ರುವನಿಗೆ ಪಟ್ಟಗಟ್ಟಿದ ಹಣ್ಣು
ಕರುಣಾಳು ಕಾಗಿನೆಲೆಯಾದಿಕೇಶವ ಹಣ್ಣು ||೩||
Labels: ಹಣ್ಣು ಕೊಂಬುವ ಬನ್ನಿರಿ, ಕನಕದಾಸರು, Hannu Kombuva Banniri, Kanakadasaru,
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ