ನೀನ್ಯಾಕೋ ನಿನ್ನ ಹಂಗ್ಯಾಕೋ
ಕೀರ್ತನಕಾರರು : ಪುರಂದರದಾಸರು
ರಾಗ : ಕಾನಡ
ತಾಳ : ಆದಿ
ನೀನ್ಯಾಕೋ ನಿನ್ನ ಹಂಗ್ಯಾಕೋ
ನಿನ್ನ ನಾಮದ ಬಲವೊಂದಿದ್ದರೆ ಸಾಕೊ ||ಪ||
ಆ ಮರ ಈ ಮರ ಧ್ಯಾನಿಸುತಿರುವಾಗ
ರಾಮ ರಾಮ ಎಂಬ ನಾಮವೆ ಕಾಯ್ತೊ ||೧||
ಬಾಲೆಯ ಸಭೆಯಲಿ ಸೀರೆಯ ಸೆಳೆವಾಗ
ಬಾಲಕೃಷ್ಣನೆಂಬ ನಾಮವೆ ಕಾಯ್ತೊ ||೨||
ಕರಿಮಕರಿಗೆ ಸಿಕ್ಕಿ ಮೊರೆಯಿಡುತಿರುವಾಗ
ಆದಿಮೂಲನೆಂಬ ನಾಮವೆ ಕಾಯ್ತೊ ||೩||
ಪ್ರಹ್ಲಾದನ ಪಿತ ಬಾಧಿಸುತಿರುವಾಗ
ನಾರಸಿಂಹನೆಂಬ ನಾಮವೆ ಕಾಯ್ತೊ ||೪||
ಹಸುಳೆ ಆ ಧ್ರುವರಾಯ ಅಡವಿಗೆ ಪೋಪಾಗ
ವಾಸುದೇವನೆಂಬ ನಾಮವೆ ಕಾಯ್ತೊ ||೫||
ನಿನ್ನ ನಾಮಕೆ ಸರಿ ಯಾವುದು ಕಾಣೆನೊ
ಘನ್ನ ಮಹಿಮ ಸಿರಿ ಪುರಂದರವಿಠಲ ||೬||
Labels: Neenyako Ninna Hangyako, ನೀನ್ಯಾಕೋ ನಿನ್ನ ಹಂಗ್ಯಾಕೋ, ಪುರಂದರದಾಸರು, Purandaradasaru
ಕೀರ್ತನಕಾರರು : ಪುರಂದರದಾಸರು
ರಾಗ : ಕಾನಡ
ತಾಳ : ಆದಿ
ನೀನ್ಯಾಕೋ ನಿನ್ನ ಹಂಗ್ಯಾಕೋ
ನಿನ್ನ ನಾಮದ ಬಲವೊಂದಿದ್ದರೆ ಸಾಕೊ ||ಪ||
ಆ ಮರ ಈ ಮರ ಧ್ಯಾನಿಸುತಿರುವಾಗ
ರಾಮ ರಾಮ ಎಂಬ ನಾಮವೆ ಕಾಯ್ತೊ ||೧||
ಬಾಲೆಯ ಸಭೆಯಲಿ ಸೀರೆಯ ಸೆಳೆವಾಗ
ಬಾಲಕೃಷ್ಣನೆಂಬ ನಾಮವೆ ಕಾಯ್ತೊ ||೨||
ಕರಿಮಕರಿಗೆ ಸಿಕ್ಕಿ ಮೊರೆಯಿಡುತಿರುವಾಗ
ಆದಿಮೂಲನೆಂಬ ನಾಮವೆ ಕಾಯ್ತೊ ||೩||
ಪ್ರಹ್ಲಾದನ ಪಿತ ಬಾಧಿಸುತಿರುವಾಗ
ನಾರಸಿಂಹನೆಂಬ ನಾಮವೆ ಕಾಯ್ತೊ ||೪||
ಹಸುಳೆ ಆ ಧ್ರುವರಾಯ ಅಡವಿಗೆ ಪೋಪಾಗ
ವಾಸುದೇವನೆಂಬ ನಾಮವೆ ಕಾಯ್ತೊ ||೫||
ನಿನ್ನ ನಾಮಕೆ ಸರಿ ಯಾವುದು ಕಾಣೆನೊ
ಘನ್ನ ಮಹಿಮ ಸಿರಿ ಪುರಂದರವಿಠಲ ||೬||
Labels: Neenyako Ninna Hangyako, ನೀನ್ಯಾಕೋ ನಿನ್ನ ಹಂಗ್ಯಾಕೋ, ಪುರಂದರದಾಸರು, Purandaradasaru
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ