ಅನುಭವದಡುಗೆಯ ಮಾಡಿ
ಕೀರ್ತನಕಾರರು : ಪುರಂದರದಾಸರು
ರಾಗ : ನಾದನಾಮಕ್ರಿಯೆ
ತಾಳ : ಛಾಪು
ಅನುಭವದಡುಗೆಯ ಮಾಡಿ ಅದ
ಕ್ಕನುಭವಿಗಳು ಬಂದು ನೀವೆಲ್ಲ ಕೂಡಿ ।।ಪ।।
ತನುವೆಂಬ ಭಾಂಡವ ತೊಳೆದು ಕೆಟ್ಟ
ಮನದ ಚಂಚಲವೆಂಬ ಮುಸುರೆಯ ಕಳೆದು
ಘನವಾಗಿ ಮನೆಯನ್ನು ಬಳಿದು ಅಲ್ಲಿ
ಮಿನುಗುವ ತ್ರಿಗುಣವ ಒಲೆಗುಂಡನೆಡೆದು ।।೧।।
ವಿರಕ್ತಿಯೆಂಬುವ ಮಡಿಯುಟ್ಟು ಪೂರ್ಣ
ಹರಿಭಕ್ತಿಯೆಂಬ ನೀರನ್ನೆಸರಿಟ್ಟು
ಅರಿವೆಂಬ ಬೆಂಕಿಯ ಕೊಟ್ಟು ಮಾಯಾ
ಮರೆವೆಂಬ ಕಾಷ್ಟವ ಮುದದಿಂದ ಸುಟ್ಟು ।।೨।।
ಶರಣೆಂಬೊ ಸಾಮಗ್ರಿ ಹೂಡಿ ಮೋಕ್ಷ
ಪರಿಕರವಾದಂಥ ಪಾಕವ ಮಾಡಿ
ಗುರು ಶರಣರು ಸವಿದಾಡಿ ನಮ್ಮ ಪುರಂ
ದರವಿಠಲನ ಬಿಡದೆ ಕೊಂಡಾಡಿ ।।೩।।
Labelas: ಅನುಭವದಡುಗೆಯ ಮಾಡಿ, Anubhavadadugeya Maadi, ಪುರಂದರದಾಸರು, Purandaradasaru
ಕೀರ್ತನಕಾರರು : ಪುರಂದರದಾಸರು
ರಾಗ : ನಾದನಾಮಕ್ರಿಯೆ
ತಾಳ : ಛಾಪು
ಅನುಭವದಡುಗೆಯ ಮಾಡಿ ಅದ
ಕ್ಕನುಭವಿಗಳು ಬಂದು ನೀವೆಲ್ಲ ಕೂಡಿ ।।ಪ।।
ತನುವೆಂಬ ಭಾಂಡವ ತೊಳೆದು ಕೆಟ್ಟ
ಮನದ ಚಂಚಲವೆಂಬ ಮುಸುರೆಯ ಕಳೆದು
ಘನವಾಗಿ ಮನೆಯನ್ನು ಬಳಿದು ಅಲ್ಲಿ
ಮಿನುಗುವ ತ್ರಿಗುಣವ ಒಲೆಗುಂಡನೆಡೆದು ।।೧।।
ವಿರಕ್ತಿಯೆಂಬುವ ಮಡಿಯುಟ್ಟು ಪೂರ್ಣ
ಹರಿಭಕ್ತಿಯೆಂಬ ನೀರನ್ನೆಸರಿಟ್ಟು
ಅರಿವೆಂಬ ಬೆಂಕಿಯ ಕೊಟ್ಟು ಮಾಯಾ
ಮರೆವೆಂಬ ಕಾಷ್ಟವ ಮುದದಿಂದ ಸುಟ್ಟು ।।೨।।
ಶರಣೆಂಬೊ ಸಾಮಗ್ರಿ ಹೂಡಿ ಮೋಕ್ಷ
ಪರಿಕರವಾದಂಥ ಪಾಕವ ಮಾಡಿ
ಗುರು ಶರಣರು ಸವಿದಾಡಿ ನಮ್ಮ ಪುರಂ
ದರವಿಠಲನ ಬಿಡದೆ ಕೊಂಡಾಡಿ ।।೩।।
Labelas: ಅನುಭವದಡುಗೆಯ ಮಾಡಿ, Anubhavadadugeya Maadi, ಪುರಂದರದಾಸರು, Purandaradasaru
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ