ಹರಿಯೆಂಬ ನಾಮಾಮೃತದ ಸುರುಚಿಯು
ಕೀರ್ತನಕಾರರು : ಪುರಂದರದಾಸರು
ರಾಗ : ಆರಭಿ
ತಾಳ : ಅಟ್ಟ
ಹರಿಯೆಂಬ ನಾಮಾಮೃತದ ಸುರುಸಿಯು ಪರಮ ಭಕ್ತರಿಗಲ್ಲದೆ ।।ಪ।।
ಅರಿಯದ ಕಡುಮೂರ್ಖ ನೀಚ ಜನರಿಗೆಲ್ಲ ಹರುಷವಾಗಬಲ್ಲದೆ ।।ಅ.ಪ।।
ಅಂದಿಗೆ ಅರಳೆಲೆ ಇಟ್ಟರೆ ಕೊಡ ಕಂದನಾಗಬಲ್ಲುದೆ
ಹಂದಿಗೆ ಸಕ್ಕರೆ ತುಪ್ಪ ತಿನಿಸಲು ಗಜೇಂದ್ರನಾಗಬಲ್ಲುದೆ
ಚಂದಿರನ ಪೂರ್ಣ ಕಳೆಯನು ತೋರಲು ಅಂಧ ನೋಡಬಲ್ಲನೆ
ಇಂದಿರೆ ಅರಸನ ನಾಮದ ಮಹಿಮೆಯ ಮಂದಜ್ಞಾನಿ ಬಲ್ಲನೆ ।।೧।।
ಉರಗಕ್ಕೆ ಕ್ಷೀರವನೆರೆಯಲು ಅದರ ವಿಷವು ಹೋಗಬಲ್ಲುದೆ
ತ್ವರೆಯಿಂದ ನೀಲಿಯ ಕರದಲಿ ತೊಳೆಯಲು ಕರಿದು ಹೋಗಬಲ್ಲುದೆ
ಪರಿಪರಿ ಬಂಗಾರವಿಟ್ಟರೆ ದಾಸಿಯು ಅರಸಿಯಾಗಬಲ್ಲಳೆ
ಭರದಿಂದ ಶ್ವಾನನ ಬಾಲವ ತಿದ್ದಲು ಸರಳವಾಗಬಲ್ಲುದೆ ।।೨।।
ಮೋಡಕೆ ಮಯೂರ ಕುಣಿವಂತೆ ಕುಕ್ಕುಟ ನೋಡಿ ಕುಣಿಯಬಲ್ಲುದೆ
ಹಾಡಿನ ಸವಿಯನು ಬಧಿರನು ಕೇಳಿ ಹರುಷಪಡಲು ಬಲ್ಲನೆ
ಗೋಡೆಯ ಮುಂದೆ ನಾಟ್ಯವನಾಡಲು ನೋಡಿ ಸುಖಿಸಬಲ್ಲುದೆ
ರೂಢಿಗೊಡೆಯ ನಮ್ಮ ಪುರಂದರವಿಠಲನ ಮೂಢಜ್ಞಾನಿ ಬಲ್ಲನೆ ।।೩।।
Labels: ಹರಿಯೆಂಬ ನಾಮಾಮೃತದ ಸುರುಚಿಯು, Hariyemba Namamritada Suruchiyu, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ