ಎಲ್ಲಿರುವನೋ ರಂಗ
ಕೀರ್ತನಕಾರರು : ಕನಕದಾಸರು
ರಾಗ : ಮುಖಾರಿ
ತಾಳ : ಝಂಪೆ
ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ।।ಪ॥
ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನು ।।ಅ.ಪ॥
ತರಳ ಪ್ರಹ್ಲಾದ ಹರಿ ವಿಶ್ವಮಯನೆಂದು
ಭರದೊದೆಯಲವನಪಿತ ಕೋಪದಿಂದ
ಸ್ಥಿರವಾದೊಳಿ ಕಂಭದಲಿ ತೋರು ತೋರೆನಲು
ಭರದಿಂದ ಬರಲದಕೆ ವೈಕುಂಠ ನೆರೆಮನೆಯೇ ।।೧।।
ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆ
ತರುಣಿ ಹಾ ಕೃಷ್ಣ ಎಂದರೆ ಕೇಳ್ದು
ಭರದಿಂದ ಅಕ್ಷಯಾಂಬರವೀಯೆ ಹಸ್ತಿನಾ
ಪುರಿಗೆ ದ್ವಾರಾವತಿಯು ಕೂಗಳತೆಯೇ ।।೨।।
ಅಣುಹೊತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯ
ಗಣನೆಯಿಲ್ಲದ ಮಹಾಮಹಿಮನೆನಿಪ
ಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನು
ನೆನೆವರ ಮನದೊಳಿಹನೆಂಬ ಬಿರುದುಂಟಾಗಿ ।।೩।।
Labels: ಎಲ್ಲಿರುವನೋ ರಂಗ, Elliravano Ranga, ಕನಕದಾಸರು, Kanakadasaru
ಕೀರ್ತನಕಾರರು : ಕನಕದಾಸರು
ರಾಗ : ಮುಖಾರಿ
ತಾಳ : ಝಂಪೆ
ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ।।ಪ॥
ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನು ।।ಅ.ಪ॥
ತರಳ ಪ್ರಹ್ಲಾದ ಹರಿ ವಿಶ್ವಮಯನೆಂದು
ಭರದೊದೆಯಲವನಪಿತ ಕೋಪದಿಂದ
ಸ್ಥಿರವಾದೊಳಿ ಕಂಭದಲಿ ತೋರು ತೋರೆನಲು
ಭರದಿಂದ ಬರಲದಕೆ ವೈಕುಂಠ ನೆರೆಮನೆಯೇ ।।೧।।
ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆ
ತರುಣಿ ಹಾ ಕೃಷ್ಣ ಎಂದರೆ ಕೇಳ್ದು
ಭರದಿಂದ ಅಕ್ಷಯಾಂಬರವೀಯೆ ಹಸ್ತಿನಾ
ಪುರಿಗೆ ದ್ವಾರಾವತಿಯು ಕೂಗಳತೆಯೇ ।।೨।।
ಅಣುಹೊತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯ
ಗಣನೆಯಿಲ್ಲದ ಮಹಾಮಹಿಮನೆನಿಪ
ಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನು
ನೆನೆವರ ಮನದೊಳಿಹನೆಂಬ ಬಿರುದುಂಟಾಗಿ ।।೩।।
Labels: ಎಲ್ಲಿರುವನೋ ರಂಗ, Elliravano Ranga, ಕನಕದಾಸರು, Kanakadasaru
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ