ಭಾನುವಾರ, ಆಗಸ್ಟ್ 4, 2013

ಇನ್ನೂ ದಯೆ ಬಾರದೆ ದಾಸನ ಮೇಲೆ : Innoo Daye Baarade Daasana Mele

ಇನ್ನೂ ದಯೆ ಬಾರದೆ ದಾಸನ ಮೇಲೆ

ಕೀರ್ತನಕಾರರು : ಪುರಂದರದಾಸರು
ರಾಗ :  ಕಲ್ಯಾಣಿ
ತಾಳ : ಮಿಶ್ರಛಾಪು 

ಇನ್ನೂ ದಯೆ ಬಾರದೆ ದಾಸನ ಮೇಲೆ 
ಪನ್ನಂಗಶಯನ ಪಾಲ್ಗಡಲೊಡೆಯನೆ ರಂಗ                     ।।ಪ।।

ನಾನಾ ದೇಶಗಳಲ್ಲಿ ನಾನಾ ಕಾಲಗಳಲ್ಲಿ 
ನಾನಾ ಯೋನಿಗಳಲ್ಲಿ ಅಳಿದು ಪುಟ್ಟಿ 
ನಾನು ನನ್ನದು ಎಂಬ ನರಕದೊಳಗೆ ಬಿದ್ದು 
ನೀನೇ ಗತಿಯೆಂದು ನಂಬಿದ ದಾಸನ ಮೇಲೆ                    ।।೧।।

ಕಾಮಾದಿ ಷಡ್ವರ್ಗ ಗಾಢಾಂಧಕಾರದಿ 
ಪಾಮರನಾಗಿದ್ದ ಪಾತಕನು 
ಶ್ರೀಮನೋಹರನೆ ಚಿತ್ತಜ ಜನಕನೆ
ನಾಮಮುದ್ರಿಕೆಯಿಂದ ನಂಬಿದ ದಾಸನ ಮೇಲೆ                 ।।೨।।

ಮಾನಸ ವಾಚ ಕಾಯದಿ ಮಾಳ್ಪ ಕರ್ಮವು 
ದಾನವಾಂತಕ ನಿನ್ನಾಧೀನವಲ್ಲವೆ 
ಏನು ಮಾಡಿದರೇನು ಪ್ರಾಣ ನಿನ್ನದು ದೇವ 
ಶ್ರೀನಾಥ ಪುರಂದರವಿಠಲ ದಾಸನ ಮೇಲೆ                        ।।೩।।

Labels : ಇನ್ನೂ ದಯೆ ಬಾರದೆ ದಾಸನ ಮೇಲೆ, Innoo Daye Baarade Daasana Mele, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ