ಕುಲಕುಲ ಕುಲವೆಂದು ಹೊಡೆದಾಡದಿರಿ
ಕೀರ್ತನಕಾರರು : ಕನಕದಾಸರು
ರಾಗ : ಪಂತುವರಾಳಿ
ತಾಳ : ಅಟ್ಟ
ಕುಲಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದ ನೆಲೆಯನೇನಾದರೂ ಬಲ್ಲಿರಾ ।।ಪ।।
ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲವೋ
ಗುಟ್ಟುಕಾಣಿಸೆ ಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕಂಡ್ಯ ಮನುಜ ।।೧।।
ಜಲವೇ ಸಕಲ ಕುಲಕ್ಕೆ ತಾಯಿಯಲ್ಲವೆ ಆ
ಜಲದ ಕುಲವನೇನಾದರೂ ಬಲ್ಲಿರಾ
ಜಲದ ಬೊಬ್ಬುಳಿಯಂತೆ ಸ್ಥಿರವಲ್ಲ ಈ ದೇಹ
ನೆಲೆಯನರಿತು ನೀ ಹರಿಯ ನೆನೆ ಮನುಜ ।।೨।।
ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿಕೇಶವರಾಯನ
ಚರಣಕಮಲವನು ಕೀರ್ತಿಸುವನೆ ಕುಲಜ ।।೪।।
Labels: ಕುಲಕುಲ ಕುಲವೆಂದು ಹೊಡೆದಾಡದಿರಿ, Kulakula Kulavendu Hodedadadiri, ಕನಕದಾಸರು, Kanakadasaru
ಕೀರ್ತನಕಾರರು : ಕನಕದಾಸರು
ರಾಗ : ಪಂತುವರಾಳಿ
ತಾಳ : ಅಟ್ಟ
ಕುಲಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದ ನೆಲೆಯನೇನಾದರೂ ಬಲ್ಲಿರಾ ।।ಪ।।
ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲವೋ
ಗುಟ್ಟುಕಾಣಿಸೆ ಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕಂಡ್ಯ ಮನುಜ ।।೧।।
ಜಲವೇ ಸಕಲ ಕುಲಕ್ಕೆ ತಾಯಿಯಲ್ಲವೆ ಆ
ಜಲದ ಕುಲವನೇನಾದರೂ ಬಲ್ಲಿರಾ
ಜಲದ ಬೊಬ್ಬುಳಿಯಂತೆ ಸ್ಥಿರವಲ್ಲ ಈ ದೇಹ
ನೆಲೆಯನರಿತು ನೀ ಹರಿಯ ನೆನೆ ಮನುಜ ।।೨।।
ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿಕೇಶವರಾಯನ
ಚರಣಕಮಲವನು ಕೀರ್ತಿಸುವನೆ ಕುಲಜ ।।೪।।
Labels: ಕುಲಕುಲ ಕುಲವೆಂದು ಹೊಡೆದಾಡದಿರಿ, Kulakula Kulavendu Hodedadadiri, ಕನಕದಾಸರು, Kanakadasaru
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ