ಸದಾ ಎನ್ನ ಹೃದಯದಲ್ಲಿ
ಕೀರ್ತನಕಾರರು : ವಿಜಯದಾಸರು
ರಾಗ : ಪಂತುವರಾಳಿ
ತಾಳ : ಆದಿ
ಸದಾ ಎನ್ನ ಹೃದಯದಲ್ಲಿ ವಾಸ ಮಾಡೋ ಶ್ರೀ ಹರಿ
ನಾದಮೂರ್ತಿ ನಿನ್ನ ಪಾದ ಮೋದದಿಂದ ಭಜಿಸುವೆನೋ ।।ಪ।।
ಙ್ಞಾನವೆಂಬೋ ನವರತ್ನದ ಮಂಟಪದ ಮಧ್ಯದಲ್ಲಿ
ವೇಣುಗಾನ ಲೋಲನ ಕುಳ್ಳಿರಿಸಿ ಧ್ಯಾನದಿಂದ ಭಜಿಸುವೇನೋ ।।೧।।
ಭಕ್ತಿರಸವೆಂಬೋ ಮುತ್ತು ಮಾಣಿಕ್ಯದಾ ಹರಿವಾಣದಿ
ಮುಕ್ತನಾಗಬೇಕು ಎಂದು ಮುತ್ತಿನಾರತಿ ಎತ್ತುವೇನೋ ।।೨।।
ನಿನ್ನ ನಾನು ಬಿಡುವನಲ್ಲ ಎನ್ನ ನೀನು ಬಿಡಲು ಸಲ್ಲ
ಘನ ಮಹಿಮ ವಿಜಯವಿಠಲ ನಿನ್ನ ಭಕುತರ ಕೇಳೋ ಸೊಲ್ಲ ।।೩।।
Labels: ಸದಾ ಎನ್ನ ಹೃದಯದಲ್ಲಿ, Sada Enna Hridayadalli, ವಿಜಯದಾಸರು, Vijayadasaru

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ