ಅಲ್ಲಿ ನೋಡಲು ರಾಮ
ಕೀರ್ತನಕಾರರು : ಪುರಂದರದಾಸರು
ರಾಗ : ನಾಟಕುರುಂಜಿ
ತಾಳ : ರೂಪಕ
ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ
ಎಲ್ಲಿಲ್ಲಿ ನೋಡಿದರೂ ಅಲ್ಲಿ ಶ್ರೀರಾಮ ||ಪ||
ರಾವಣನ ಮೂಲಬಲ ಕಂಡು ಕಪಿಸೇನೆ
ಆವಾಗಲೇ ಬೆದರಿ ಓಡಿದವು
ಈವೇಳೆ ನರನಾಗಿ ಇರಬಾರದೆಂದೆಣಿಸಿ
ದೇವ ರಾಮಚಂದ್ರ ಜಗವೆಲ್ಲ ತಾನಾದ ||೧||
ಅವನಿಗೆ ಇವ ರಾಮ ಇವನಿಗೆ ಅವ ರಾಮ
ಅವನಿಯೊಳೀಪರಿ ರೂಪ ಉಂಟೆ
ಲವ ಮಾತ್ರದಿ ಅಸುರ ದುರುಳರೆಲ್ಲರು
ಅವರವರೆ ಹೊಡೆದಾಡಿ ಹತರಾಗಿ ಹೋದರು ||೨||
ಹನುಮಾದಿ ಸಾಧು ಜನರು ಅಪ್ಪಿಕೊಂಡು
ಕುಣಿಕುಣಿದಾಡಿದರು ಅತಿ ಹರುಷದಲಿ
ಕ್ಷಣದಲ್ಲಿ ಪುರಂದರವಿಠಲರಾಯನು
ಕೊನೆಗೊಡೆಯನು ತಾನೊಬ್ಬನಾಗಿ ನಿಂತ ||೩||
Labels: ಅಲ್ಲಿ ನೋಡಲು ರಾಮ, Alli Nodalu Rama, ಪುರಂದರದಾಸರು, Purandaradasaru
ಕೀರ್ತನಕಾರರು : ಪುರಂದರದಾಸರು
ರಾಗ : ನಾಟಕುರುಂಜಿ
ತಾಳ : ರೂಪಕ
ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ
ಎಲ್ಲಿಲ್ಲಿ ನೋಡಿದರೂ ಅಲ್ಲಿ ಶ್ರೀರಾಮ ||ಪ||
ರಾವಣನ ಮೂಲಬಲ ಕಂಡು ಕಪಿಸೇನೆ
ಆವಾಗಲೇ ಬೆದರಿ ಓಡಿದವು
ಈವೇಳೆ ನರನಾಗಿ ಇರಬಾರದೆಂದೆಣಿಸಿ
ದೇವ ರಾಮಚಂದ್ರ ಜಗವೆಲ್ಲ ತಾನಾದ ||೧||
ಅವನಿಗೆ ಇವ ರಾಮ ಇವನಿಗೆ ಅವ ರಾಮ
ಅವನಿಯೊಳೀಪರಿ ರೂಪ ಉಂಟೆ
ಲವ ಮಾತ್ರದಿ ಅಸುರ ದುರುಳರೆಲ್ಲರು
ಅವರವರೆ ಹೊಡೆದಾಡಿ ಹತರಾಗಿ ಹೋದರು ||೨||
ಹನುಮಾದಿ ಸಾಧು ಜನರು ಅಪ್ಪಿಕೊಂಡು
ಕುಣಿಕುಣಿದಾಡಿದರು ಅತಿ ಹರುಷದಲಿ
ಕ್ಷಣದಲ್ಲಿ ಪುರಂದರವಿಠಲರಾಯನು
ಕೊನೆಗೊಡೆಯನು ತಾನೊಬ್ಬನಾಗಿ ನಿಂತ ||೩||
Labels: ಅಲ್ಲಿ ನೋಡಲು ರಾಮ, Alli Nodalu Rama, ಪುರಂದರದಾಸರು, Purandaradasaru
ನಿಮ್ಮ ಶ್ರಮ ಸಾರ್ಥಕ 🙏
ಪ್ರತ್ಯುತ್ತರಅಳಿಸಿನಿಮ್ಮ ಶ್ರಮ ಸಾರ್ಥಕ 🙏
ಪ್ರತ್ಯುತ್ತರಅಳಿಸಿ