ನಂದ ತನಯ ಗೋವಿಂದನ ಭಜಿಪುದು
ಕೀರ್ತನಕಾರರು : ಪುರಂದರದಾಸರು
ರಾಗ : ಕೇದಾರ ಗೊವ್ಳ
ತಾಳ : ಆದಿ
ನಂದ ತನಯ ಗೋವಿಂದನ ಭಜಿಪುದು ಆನಂದವಾದ ಮಿಠಾಯಿ ||ಪ||
ಬಂಧಗಳನು ಭವ ರೋಗಗಳೆಲ್ಲನು ನಿಂದಿಪುದು ಈ ಮಿಠಾಯಿ ||ಅ.ಪ||
ದಧಿ ಘೃತ ಕ್ಷೀರಂಗಳಿಗಿಂತಲೂ ಬಹು ಅಧಿಕವಾದ ಮಿಠಾಯಿ
ಕದಳೀ ದ್ರಾಕ್ಷಿ ಖರ್ಜೂರ ರಸಗಳನು ಮೀರುವುದು ಈ ಮಿಠಾಯಿ ||೧||
ಪಂಚ ಭಕ್ಷ್ಯಂಗಳ ಷಡ್ರಸಾನ್ನಗಳ ಮಿಂಚಿದಂಥ ಮಿಠಾಯಿ
ಕಂಚೀಶನೆ ರಕ್ಷಿಸು ಎಂದುಸಿರುವರ ಅಂಜಿಕೆ ಬಿಡಿಪ ಮಿಠಾಯಿ ||೨||
ಜಪ ತಪ ಸಾಧನಗಳಿಗಿಂತಲೂ ಬಹು ಅಪರೂಪದ ಮಿಠಾಯಿ
ಜಿಪುಣ ಮತಿಗಳಿಗೆ ಸಧ್ಯವಲ್ಲದಿಹ ಪುರಂದರ ವಿಠಲ ಮಿಠಾಯಿ ||೩||
Labels: ನಂದ ತನಯ ಗೋವಿಂದನ ಭಜಿಪುದು, Nanda Tanaya Govindana Bhajipudu, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ