ನಾರಾಯಣ ನಿನ್ನ ನಾಮದ
ಕೀರ್ತನಕಾರರು : ಪುರಂದರದಾಸರು
ರಾಗ : ಆನಂದಭೈರವಿ
ತಾಳ : ಅಟ್ಟ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವೆನ್ನ ನಾಲಿಗೆಗೆ ಬರಲಿ ||ಪ ||
ಕೂಡುವಾಗಲಿ ನಿಂತಾಡುವಾಗಲಿ ಮತ್ತೆ
ಹಾಡುವಾಗಲಿ ಹರಿದಾಡುವಾಗಲಿ
ಕೋಟಿ ವಿನೋದದಿ ನೋಡದೆ ನಾ
ಮಾಡಿದ ಪಾಪ ಬಿಟ್ಟೋಡಿ ಹೋಗೋ ಹಾಗೆ ||೧||
ಊರಿಗೆ ಹೋಗಲಿ ಊರೊಳಗಿರಲಿ
ಕಾರಣಾರ್ಥಂಗಳೆಲ್ಲ ಕಾದಿರಲಿ
ವಾರಿಜನಾಭ ನರಸಾರಥಿ ಸನ್ನುತ
ಸಾರಿಸಾರಿಗೆ ನಾ ಬೀಸರದ್ಹಾಂಗೆ ||೨||
ಹಸಿದಿದ್ದಾಗಲಿ ಹಸಿವಿಲ್ಲದಾಗಲಿ
ಕಸವಿಸಿಯಿರಲಿ ಹರುಷಿರಲಿ
ವಸುದೇವಾತ್ಮಕ ಶಿಶುಪಾಲಕ್ಷಯ
ಅಸುರಾಂತಕ ನಿನ್ನ ಹೆಸರು ಮರೆಯದ್ಹಾಂಗೆ ||೩||
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ
ಎಷ್ಟಾದರೂ ಮತಿಗೆಟ್ಟಿರಲಿ
ಕೃಷ್ಣ ಕೃಷ್ಣ ಎಂದು ಶಿಷ್ಟರು ಪೇಳುವ
ಅಷ್ಟಾಕ್ಷರ ಮಹಾಮಂತ್ರದ ನಾಮವ ||೪||
ಕನಸಿನೊಳಾಗಲಿ ಕಳವಳಿಕಾಗಲಿ
ಮನಸುಗೊಟ್ಟಿರಲಿ ಮುನಿದಿರಲಿ
ಜನಕಜಾಪತಿ ನಿನ್ನ ಚರಣಕಮಲವನು
ಮನಸಿನೊಳಗೆ ಒಮ್ಮೆ ನೆನಸಿಕೊಳ್ಳೋ ಹಾಂಗೆ ||೫||
ಜ್ವರ ಬಂದಾಗಲಿ ಚಲಿ ಬಂದಾಗಲಿ
ಮರಳಿ ಮರಳಿ ಮತ್ತೆ ನಡುಗವಾಗಲಿ
ಹರಿನಾರಾಯಣ ದುರಿತನಿವಾರಣೆಂದು
ಇರುಳು ಹಗಲು ನಿನ್ನ ಸ್ಮರಣೆ ಮರೆಯದ್ಹಾಂಗೆ ||೬||
ಸಂತತ ಹರಿ ನಿನ್ನ ಸಾಸಿರನಾಮವ
ಅಂತರಂಗದ ಒಳಗಿರಿಸಿ
ಎಂತೋ ಪುರಂದರವಿಠ್ಠಲರಾಯನ
ಅಂತ್ಯಕಾಲದಲ್ಲಿ ಚಿಂತಿಸೋ ಹಾಂಗೆ ||೭||
Labels: ನಾರಾಯಣ ನಿನ್ನ ನಾಮದ, Narayana Ninna Namada, ಪುರಂದರದಾಸರು, Purandaradasaru
ಕೀರ್ತನಕಾರರು : ಪುರಂದರದಾಸರು
ರಾಗ : ಆನಂದಭೈರವಿ
ತಾಳ : ಅಟ್ಟ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವೆನ್ನ ನಾಲಿಗೆಗೆ ಬರಲಿ ||ಪ ||
ಕೂಡುವಾಗಲಿ ನಿಂತಾಡುವಾಗಲಿ ಮತ್ತೆ
ಹಾಡುವಾಗಲಿ ಹರಿದಾಡುವಾಗಲಿ
ಕೋಟಿ ವಿನೋದದಿ ನೋಡದೆ ನಾ
ಮಾಡಿದ ಪಾಪ ಬಿಟ್ಟೋಡಿ ಹೋಗೋ ಹಾಗೆ ||೧||
ಊರಿಗೆ ಹೋಗಲಿ ಊರೊಳಗಿರಲಿ
ಕಾರಣಾರ್ಥಂಗಳೆಲ್ಲ ಕಾದಿರಲಿ
ವಾರಿಜನಾಭ ನರಸಾರಥಿ ಸನ್ನುತ
ಸಾರಿಸಾರಿಗೆ ನಾ ಬೀಸರದ್ಹಾಂಗೆ ||೨||
ಹಸಿದಿದ್ದಾಗಲಿ ಹಸಿವಿಲ್ಲದಾಗಲಿ
ಕಸವಿಸಿಯಿರಲಿ ಹರುಷಿರಲಿ
ವಸುದೇವಾತ್ಮಕ ಶಿಶುಪಾಲಕ್ಷಯ
ಅಸುರಾಂತಕ ನಿನ್ನ ಹೆಸರು ಮರೆಯದ್ಹಾಂಗೆ ||೩||
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ
ಎಷ್ಟಾದರೂ ಮತಿಗೆಟ್ಟಿರಲಿ
ಕೃಷ್ಣ ಕೃಷ್ಣ ಎಂದು ಶಿಷ್ಟರು ಪೇಳುವ
ಅಷ್ಟಾಕ್ಷರ ಮಹಾಮಂತ್ರದ ನಾಮವ ||೪||
ಕನಸಿನೊಳಾಗಲಿ ಕಳವಳಿಕಾಗಲಿ
ಮನಸುಗೊಟ್ಟಿರಲಿ ಮುನಿದಿರಲಿ
ಜನಕಜಾಪತಿ ನಿನ್ನ ಚರಣಕಮಲವನು
ಮನಸಿನೊಳಗೆ ಒಮ್ಮೆ ನೆನಸಿಕೊಳ್ಳೋ ಹಾಂಗೆ ||೫||
ಜ್ವರ ಬಂದಾಗಲಿ ಚಲಿ ಬಂದಾಗಲಿ
ಮರಳಿ ಮರಳಿ ಮತ್ತೆ ನಡುಗವಾಗಲಿ
ಹರಿನಾರಾಯಣ ದುರಿತನಿವಾರಣೆಂದು
ಇರುಳು ಹಗಲು ನಿನ್ನ ಸ್ಮರಣೆ ಮರೆಯದ್ಹಾಂಗೆ ||೬||
ಸಂತತ ಹರಿ ನಿನ್ನ ಸಾಸಿರನಾಮವ
ಅಂತರಂಗದ ಒಳಗಿರಿಸಿ
ಎಂತೋ ಪುರಂದರವಿಠ್ಠಲರಾಯನ
ಅಂತ್ಯಕಾಲದಲ್ಲಿ ಚಿಂತಿಸೋ ಹಾಂಗೆ ||೭||
Labels: ನಾರಾಯಣ ನಿನ್ನ ನಾಮದ, Narayana Ninna Namada, ಪುರಂದರದಾಸರು, Purandaradasaru
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ