ಪಂಕಜ ಮುಖಿಯರೆಲ್ಲರು ಬಂದು
ಕೀರ್ತನಕಾರರು : ಪುರಂದರದಾಸರು
ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ ವೇಂಕಟರಮಣಗಾರತಿ ಎತ್ತಿರೆ ।।ಪ॥
ಮತ್ಸ್ಯಾವತಾರಗೆ ಮಂದರೋದ್ಧಾರಗೆ ಅಚ್ಚರಿಯಿಂದ ಭೂಮಿ ತಂದವಗೆ
ಹೆಚ್ಚಾದ ಉಕ್ಕಿನ ಕಂಭದಿಂದಲಿ ಬಂದ ಲಕ್ಷ್ಮೀ ನರಸಿಂಹಗಾರತಿ ಎತ್ತಿರೆ ।।೧।।
ವಾಮನ ರೂಪಲಿ ದಾನ ಬೇಡಿದವಗೆ ಪ್ರೇಮದಿ ಕೊಡಲಿಯ ಪಿಡಿದವಗೆ
ರಾಮಚಂದ್ರನಾಗಿ ದಶ ಶಿರನನು ಕೊಂದ ಸ್ವಾಮಿ ಶ್ರೀ ಕೃಷ್ಣಗಾರತಿ ಎತ್ತಿರೆ ।।೨।।
ಬತ್ತಲೆ ನಿಂತಗೆ ಬೌದ್ಧಾವತಾರಗೆ ಉತ್ತಮ ಅಶ್ವನೇರಿದಗೆ
ಭಕ್ತರ ಸಲಹುವ ಪುರಂದರ ವಿಠಲಗೆ ಮುತ್ತೈದೆಯರಾರತಿ ಎತ್ತಿರೆ ।।೩।।
Labels: ಪಂಕಜ ಮುಖಿಯರೆಲ್ಲರು ಬಂದು, Pankaja Mukhiyarellaru Bandu, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ