ಸೋಮವಾರ, ಸೆಪ್ಟೆಂಬರ್ 9, 2013

ರಾಮ ಎಂಬುವ ಎರಡು ಅಕ್ಷರದ : Rama Embuva Eradaksharada

ರಾಮ ಎಂಬುವ ಎರಡು ಅಕ್ಷರದ

ಕೀರ್ತನಕಾರರು : ಪುರಂದರದಾಸರು
ರಾಗ : ನಾಟಕುರುಂಜಿ
ತಾಳ : ರೂಪಕ

ರಾಮ ಎಂಬುವ ಎರಡು ಅಕ್ಷರದ ಮಹಿಮೆಯನು
ಪಾಮರರು ತಾವೇನು ಬಲ್ಲಿರಯ್ಯ                            ||ಪ||

ರಾ ಎಂದ ಮಾತ್ರದೊಳು ರಕ್ತ ಮಾಂಸದೊಳಿದ್ದ
ಆಯಸ್ಥಿತಗತವಾದ ಅತಿ ಪಾಪವನ್ನು
ಮಾಯವನು ಮಾಡಿ ಮಹರಾಯ ಮುಕ್ತಿಯ ಕೊಡುವ
ದಾಯವನು ವಾಲ್ಮೀಕಿ ಮುನಿರಾಯ ಬಲ್ಲ                  ||೧||

ಮತ್ತೆ ಮಾ ಎಂದೆನಲು ಹೊರಬಿದ್ದ ಪಾಪಗಳು
ಒತ್ತಿ ಒಳ ಪೋಗದಂತೆ ಕವಾಟವಾಗಿ
ಚಿತ್ತ ಕಾಯಗಳ ಪವಿತ್ರ ಮಾಡುವ ಪರಿಯ
ಭಕ್ತವರ ಹನುಮಂತನೊಬ್ಬ ತಾ ಬಲ್ಲ                      ||೨||

ಧರೆಯೊಳೀ ನಾಮಕ್ಕೆ ಸರಿಮಿಗಿಲು ಇಲ್ಲೆಂದು
ಪರಮ ವೇದಗಳೆಲ್ಲ ಪೊಗಳುತಿಹವು
ಸಿರಿಯರಸ ಸನ್ಸ್ಕ್ರಿತ ನಾಮವನು
ಸಿರಿ ಕಾಶಿಯೊಳಗಿಪ್ಪ ಶಿವನು ತಾ ಬಲ್ಲ                    ||೩||

Labels: ರಾಮ ಎಂಬುವ ಎರಡು ಅಕ್ಷರದ, Rama Embuva Eradaksharada
, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ