ಅಂಬೆಗಾಲಿಕ್ಕುತಲಿ ಬಂದ ಗೋವಿಂದ
ಕೀರ್ತನಕಾರರು : ಪುರಂದರದಾಸರು
ರಾಗ : ಧನ್ಯಾಸಿ
ತಾಳ : ಅಟ್ಟ
ಅಂಬೆಗಾಲಿಕ್ಕುತಲಿ ಬಂದ ಗೋವಿಂದ ॥ಪ॥
ಅಂಬುಜನಾಭ ದಯದಿಂದ ಮನೆಗೆ ॥ಅ.ಪ॥
ಜಲಚರ ಜಲವಾಸ ಧರಣಿಧರ ಮೃಗರೂಪ
ನೆಲನೆಳೆದು ಮೂರಡಿ ಮಾಡಿಬಂದ
ಕುಲನಾಶ ವನವಾಸ ನವನೀತ ಚೋರನಿವ
ಲಲನೆಯರ ವ್ರತಭಂಗ ವಾಹನ ತುರಂಗ ॥೧॥
ಕಣ್ಣಬಿಡುವನು ತನ್ನ ಬೆನ್ನ ತಗ್ಗಿಸುವನು
ಮಣ್ಣು ಕೆದರಿ ಕೋರೆ ಬಾಯ ತೆರೆದು
ಚಿಣ್ಣ ಭಾರ್ಗವ ಲಕ್ಷ್ಮಣನನ್ನ ಬೆಣ್ಣೆಯಕಳ್ಳ
ಮಾನವ ಬಿಟ್ಟು ಕುದುರೆಯನೇರಿದ ॥೨॥
ನೀರ ಪೋಕ್ಕನು ಗಿರಿಯನೆಗಹಿ ಧರಣಿಯ ತಂದು
ನರಮೃಗ ಬಲಿಬಂಧ ಕೊರಳುಗೊಯಿಕ
ಶರಮುರಿದೊರಳೆಳೆದು ನಿರವಾಣಿ ಹಾಯ ಹತ್ತಿ
ಪುರಂದರವಿಠಲ ಮನೆಗೆ ತಾ ಬಂದ ॥೩॥
Labels: ಅಂಬೆಗಾಲಿಕ್ಕುತಲಿ ಬಂದ ಗೋವಿಂದ, Ambegalikkkutali Banda Govinda, ಪುರಂದರದಾಸರು, Purandaradasaru
ಕೀರ್ತನಕಾರರು : ಪುರಂದರದಾಸರು
ರಾಗ : ಧನ್ಯಾಸಿ
ತಾಳ : ಅಟ್ಟ
ಅಂಬೆಗಾಲಿಕ್ಕುತಲಿ ಬಂದ ಗೋವಿಂದ ॥ಪ॥
ಅಂಬುಜನಾಭ ದಯದಿಂದ ಮನೆಗೆ ॥ಅ.ಪ॥
ಜಲಚರ ಜಲವಾಸ ಧರಣಿಧರ ಮೃಗರೂಪ
ನೆಲನೆಳೆದು ಮೂರಡಿ ಮಾಡಿಬಂದ
ಕುಲನಾಶ ವನವಾಸ ನವನೀತ ಚೋರನಿವ
ಲಲನೆಯರ ವ್ರತಭಂಗ ವಾಹನ ತುರಂಗ ॥೧॥
ಕಣ್ಣಬಿಡುವನು ತನ್ನ ಬೆನ್ನ ತಗ್ಗಿಸುವನು
ಮಣ್ಣು ಕೆದರಿ ಕೋರೆ ಬಾಯ ತೆರೆದು
ಚಿಣ್ಣ ಭಾರ್ಗವ ಲಕ್ಷ್ಮಣನನ್ನ ಬೆಣ್ಣೆಯಕಳ್ಳ
ಮಾನವ ಬಿಟ್ಟು ಕುದುರೆಯನೇರಿದ ॥೨॥
ನೀರ ಪೋಕ್ಕನು ಗಿರಿಯನೆಗಹಿ ಧರಣಿಯ ತಂದು
ನರಮೃಗ ಬಲಿಬಂಧ ಕೊರಳುಗೊಯಿಕ
ಶರಮುರಿದೊರಳೆಳೆದು ನಿರವಾಣಿ ಹಾಯ ಹತ್ತಿ
ಪುರಂದರವಿಠಲ ಮನೆಗೆ ತಾ ಬಂದ ॥೩॥
Labels: ಅಂಬೆಗಾಲಿಕ್ಕುತಲಿ ಬಂದ ಗೋವಿಂದ, Ambegalikkkutali Banda Govinda, ಪುರಂದರದಾಸರು, Purandaradasaru
Can you please give the audio file to listen/ download this song?
ಪ್ರತ್ಯುತ್ತರಅಳಿಸಿAwaiting response
Thanks in advance
Sindushree k m