ದುರಿತಗಜ ಪಂಚಾನನ ನರಹರಿಯೆ
ಕೀರ್ತನಕಾರರು : ಶ್ರೀಪಾದರಾಜರು
ರಾಗ : ಕಾಂಬೋದಿ
ತಾಳ : ಆದಿ
ದುರಿತಗಜ ಪಂಚಾನನ ನರ-
ಹರಿಯೆ ದೇವರ ದೇವ ಕಾಯೊ ಗೋವಿಂದ ||ಪ||
ಹೆಸರುಳ್ಳ ನದಿಗಳನೊಳಗೊಂಬ ಸಮುದ್ರನು
ಬಿಸುಡುವನೆ ಕಾಲುಹೊಳೆಗಳನು ಗೊವಿಂದ ||೧||
ಒಂದು ಮೊಲಕೆ ಆರು ಹುಲಿ ಬಂದು ಕವಿದಿವೆ
ಬಂಧನ ಬಿಡಿಸೆನ್ನ ತಂದೆ ಗೋವಿಂದ ||೨||
ಹೆತ್ತ ಮಕ್ಕಳು ಮರುಳಾದರೆ ತಾಯ್ತಂದೆ
ಎತ್ತದೆ ನೆಲಕೆ ಬಿಸುಡುವರೆ ಗೋವಿಂದ ||೩||
ಮುನ್ನ ಮಾಡಿದ ಕರ್ಮ ಬೆನ್ನಟ್ಟಿ ಬಂದರೆ
ನಿನ್ನನ್ನು ಓಲೈಸಲ್ಯಾಕೆ ಗೋವಿಂದ ||೪||
ಆಪತ್ತು ತಾಪತ್ರಯ ಬೆನ್ನ ಬಿಡದಿದ್ದರೆ
ಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ ||೫||
ಅರಸು ಮುಟ್ಟಲು ದಾಸಿ ರಂಭೆಯಾದಳು ದೇವ
ಪರುಷ ಮುಟ್ಟಲು ಲೋಹ ಹೊನ್ನು ಗೋವಿಂದ ||೬||
ಮಾನಾಭಿಮಾನದೊಡೆಯ ರಂಗವಿಠಲ
ಜ್ಞಾನಿಗಳರಸನೆ ಕಾಯೋ ಗೋವಿಂದ ||೭||
Labels: ದುರಿತಗಜ ಪಂಚಾನನ ನರಹರಿಯೆ, Duritagaja Panchanana Narahariye, ಶ್ರೀಪಾದರಾಜರು, Sripadarajaru
ಕೀರ್ತನಕಾರರು : ಶ್ರೀಪಾದರಾಜರು
ರಾಗ : ಕಾಂಬೋದಿ
ತಾಳ : ಆದಿ
ದುರಿತಗಜ ಪಂಚಾನನ ನರ-
ಹರಿಯೆ ದೇವರ ದೇವ ಕಾಯೊ ಗೋವಿಂದ ||ಪ||
ಹೆಸರುಳ್ಳ ನದಿಗಳನೊಳಗೊಂಬ ಸಮುದ್ರನು
ಬಿಸುಡುವನೆ ಕಾಲುಹೊಳೆಗಳನು ಗೊವಿಂದ ||೧||
ಒಂದು ಮೊಲಕೆ ಆರು ಹುಲಿ ಬಂದು ಕವಿದಿವೆ
ಬಂಧನ ಬಿಡಿಸೆನ್ನ ತಂದೆ ಗೋವಿಂದ ||೨||
ಹೆತ್ತ ಮಕ್ಕಳು ಮರುಳಾದರೆ ತಾಯ್ತಂದೆ
ಎತ್ತದೆ ನೆಲಕೆ ಬಿಸುಡುವರೆ ಗೋವಿಂದ ||೩||
ಮುನ್ನ ಮಾಡಿದ ಕರ್ಮ ಬೆನ್ನಟ್ಟಿ ಬಂದರೆ
ನಿನ್ನನ್ನು ಓಲೈಸಲ್ಯಾಕೆ ಗೋವಿಂದ ||೪||
ಆಪತ್ತು ತಾಪತ್ರಯ ಬೆನ್ನ ಬಿಡದಿದ್ದರೆ
ಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ ||೫||
ಅರಸು ಮುಟ್ಟಲು ದಾಸಿ ರಂಭೆಯಾದಳು ದೇವ
ಪರುಷ ಮುಟ್ಟಲು ಲೋಹ ಹೊನ್ನು ಗೋವಿಂದ ||೬||
ಮಾನಾಭಿಮಾನದೊಡೆಯ ರಂಗವಿಠಲ
ಜ್ಞಾನಿಗಳರಸನೆ ಕಾಯೋ ಗೋವಿಂದ ||೭||
Labels: ದುರಿತಗಜ ಪಂಚಾನನ ನರಹರಿಯೆ, Duritagaja Panchanana Narahariye, ಶ್ರೀಪಾದರಾಜರು, Sripadarajaru
ಈ ಕೃತಿಯ ಅರ್ಥ ತಿಳಿಸಬಹುದಾ
ಪ್ರತ್ಯುತ್ತರಅಳಿಸಿಧನ್ಯವಾದಗಳು 🙏🏻🙏🏻
ಪ್ರತ್ಯುತ್ತರಅಳಿಸಿ