ಏಕೆ ಚಿಂತಿಸುತಿದ್ದಿ ಕೋತಿ ಮನವೆ
ಕೀರ್ತನಕಾರರು : ಪುರಂದರದಾಸರು
ರಾಗ : ಭೈರವಿ
ತಾಳ : ಝಂಪೆ
ಏಕೆ ಚಿಂತಿಸುತಿದ್ದಿ ಕೋತಿ ಮನವೆ ।।ಪ॥
ಲೋಕನಾಥನ ನೆನೆದು ಸುಖಿಯಾಗು ಮನವೆ ।।ಅ.ಪ॥
ಹುಟ್ಟುವಾಗಾಪತ್ತಿಗಾರು ಚಿಂತಿಸಿದವರು
ಕಟ್ಟ ಕಡೆಯಲಿ ಲಯಕೆ ಯಾರ ಚಿಂತೆ
ನಟ್ಟನಡುವಿನ ಬಾಳಿಗೇಕೆ ಚಿಂತಿಸುತಿರುವೆ
ಹುಟ್ಟಿದವರಿಗೆ ಮೂರು ಬಟ್ಟಿಲ್ಲವೆ ಮರುಳೆ ।।೧।।
ನವಿಲಿಂಗೆ ಚಿತ್ರಪತ್ರವನಾರು ಬರೆದವರು
ಪವಳದಾ ಲತೆಗೆ ಕೆಂಪಿಟ್ಟವರು ಯಾರು
ಸವಿಮಾತಿನರಗಿಣಿಗೆ ಹಸುರು ಬಳಿದವರಾರು
ಆವ ಮಾಡಿದವ ನಮ್ಮ ಮರೆತಿಹನೆ ಮರುಳೆ ।।೨।।
ಬಸಿರೊಳಗೆ ಶಿಶುವನು ಆದಾರು ಸಲಹಿದವರು
ವಸುಧೆಯನು ಬಸಿರೊಳಿಟ್ಟಿರುವರಾರು
ಹಸಗೆಡದೆ ನಮ್ಮ ಶ್ರೀಪುರಂದರವಿಠಲನ
ಬಿಸಜಪಾದವ ನಂಬಿ ಸುಖಿಯಾಗು ಮರುಳೆ ।।೩।।
Labels: ಏಕೆ ಚಿಂತಿಸುತಿದ್ದಿ ಕೋತಿ ಮನವೆ, Eke Chintisutiddi Koti Manave, ಪುರಂದರದಾಸರು, Purandaradasaru
ಕೀರ್ತನಕಾರರು : ಪುರಂದರದಾಸರು
ರಾಗ : ಭೈರವಿ
ತಾಳ : ಝಂಪೆ
ಏಕೆ ಚಿಂತಿಸುತಿದ್ದಿ ಕೋತಿ ಮನವೆ ।।ಪ॥
ಲೋಕನಾಥನ ನೆನೆದು ಸುಖಿಯಾಗು ಮನವೆ ।।ಅ.ಪ॥
ಹುಟ್ಟುವಾಗಾಪತ್ತಿಗಾರು ಚಿಂತಿಸಿದವರು
ಕಟ್ಟ ಕಡೆಯಲಿ ಲಯಕೆ ಯಾರ ಚಿಂತೆ
ನಟ್ಟನಡುವಿನ ಬಾಳಿಗೇಕೆ ಚಿಂತಿಸುತಿರುವೆ
ಹುಟ್ಟಿದವರಿಗೆ ಮೂರು ಬಟ್ಟಿಲ್ಲವೆ ಮರುಳೆ ।।೧।।
ನವಿಲಿಂಗೆ ಚಿತ್ರಪತ್ರವನಾರು ಬರೆದವರು
ಪವಳದಾ ಲತೆಗೆ ಕೆಂಪಿಟ್ಟವರು ಯಾರು
ಸವಿಮಾತಿನರಗಿಣಿಗೆ ಹಸುರು ಬಳಿದವರಾರು
ಆವ ಮಾಡಿದವ ನಮ್ಮ ಮರೆತಿಹನೆ ಮರುಳೆ ।।೨।।
ಬಸಿರೊಳಗೆ ಶಿಶುವನು ಆದಾರು ಸಲಹಿದವರು
ವಸುಧೆಯನು ಬಸಿರೊಳಿಟ್ಟಿರುವರಾರು
ಹಸಗೆಡದೆ ನಮ್ಮ ಶ್ರೀಪುರಂದರವಿಠಲನ
ಬಿಸಜಪಾದವ ನಂಬಿ ಸುಖಿಯಾಗು ಮರುಳೆ ।।೩।।
Labels: ಏಕೆ ಚಿಂತಿಸುತಿದ್ದಿ ಕೋತಿ ಮನವೆ, Eke Chintisutiddi Koti Manave, ಪುರಂದರದಾಸರು, Purandaradasaru
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ