ಮಂಗಳವಾರ, ಸೆಪ್ಟೆಂಬರ್ 10, 2013

ಭಾಗ್ಯದ ಲಕ್ಷ್ಮಿ ಬಾರಮ್ಮ : Bhagyada Lakshmi Baramma

ಭಾಗ್ಯದ ಲಕ್ಷ್ಮಿ ಬಾರಮ್ಮ

ಕೀರ್ತನಕಾರರು : ಪುರಂದರದಾಸರು
ರಾಗ : ಮಧ್ಯಮಾವತಿ
ತಾಳ : ಆದಿ

ಭಾಗ್ಯದ ಲಕ್ಷ್ಮಿ ಬಾರಮ್ಮ ನಮ್ಮಮ್ಮಾ ನೀ
ಸೌಭಾಗ್ಯದ ಲಕ್ಷ್ಮಿ ಬಾರಮ್ಮಾ               ||ಪ||

ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ
ಗೆಜ್ಜೆ ಕಾಲಿನ ಧ್ವನಿಯ ತೋರುತ
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ             ||೧||

ಕನಕವೃಷ್ಟಿಯ ಕರೆಯುತ ಬಾರೆ
ಮನಕೆ ಮಾನವ ಸಿದ್ಧಿಯ ತೋರೆ
ದಿನಕರ ಕೋಟಿ ತೇಜದಿ ಪೊಳೆಯುವ
ಜನಕರಾಯನ ಕುಮಾರಿ ಬಾರೆ              ||೨||

ಶಂಕೆಯಿಲ್ಲದ ಭಾಗ್ಯವ ಕೊಟ್ಟು
ಕಂಕಣ ಕೈಯ ತಿರುಹುತ ಬಾರೆ
ಕುಂಕುಮಾಂಕಿತೆ ಪಂಕಜಲೋಚನೆ
ವೆಂಕಟರಮಣನ ಬಿಂಕದ ರಾಣಿ             ||೩||

ಅತ್ತಿತ್ತಗಲದೆ ಭಕ್ತರ ಮನೆಯೊಳು
ನಿತ್ಯ ಮಹೋತ್ಸವ ನಿತ್ಯ ಸುಮಂಗಲ
ಸತ್ಯವ ತೋರುತ ಸಾಧು ಸಜ್ಜನರ
ಚಿತ್ತದಿ ಹೊಳೆಯುವ ಪುತ್ತಳಿ ಬೊಂಬೆ      ||೪||

ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಆಳಗಿರಿರಂಗನ
ಚೊಕ್ಕ ಪುರಂದರವಿಠಲನ ರಾಣಿ            ||೫||

Labels: ಭಾಗ್ಯದ ಲಕ್ಷ್ಮಿ ಬಾರಮ್ಮ, Bhagyada Lakshmi Baramma, ಪುರಂದರದಾಸರು, Purandaradasaru

1 ಕಾಮೆಂಟ್‌: