ಸೋಮವಾರ, ಸೆಪ್ಟೆಂಬರ್ 9, 2013

ಯಾಕೆ ನಿರ್ದಯನಾದೆ ಎಲೊ ದೇವನೆ : Yake Nirdayanade Elo Devane

ಯಾಕೆ ನಿರ್ದಯನಾದೆ ಎಲೊ ದೇವನೆ

ಕೀರ್ತನಕಾರರು : ಪುರಂದರದಾಸರು
ರಾಗ : ಕಾಂಬೋದಿ
ತಾಳ : ಝಂಪೆ

ಯಾಕೆ ನಿರ್ದಯನಾದೆ ಎಲೊ ದೇವನೆ
ಶ್ರೀಕಾಂತ ಎನ್ನ ಮೇಲೆ ಎಳ್ಳಷ್ಟು ದಯವಿಲ್ಲ        ||ಪ||

ಕಂಗೆಟ್ಟು ಕಂಭದಲಿ ಒಡೆದು ಬಳಲಿ ಬಂದು
ಹಿಂಗದೆ ಪ್ರಹ್ಲಾದನ ಅಪ್ಪಿಕೊಂಡೆ
ಮಂಗಳಪದವಿತ್ತು ಮನ್ನಿಸಿದೆ ಅವ ನಿನಗೆ
ಭಂಗಾರವೆಷ್ಟು ಕೊಟ್ಟನು ಪೇಳೊ ಹರಿಯೆ         ||೧||

ಸಿರಿ ದೇವಿಗೆ ಹೇಳದೆ ಸೆರಗು ಸಂವರಿಸದೆ
ಗರುಡನ ಮೇಲೆ ಎರಗಿ ಗಮನವಾಗದೆ
ಭರದಿಂದ ನೀ ಬಂದು ಆತನ ಸಲಹಿದೆ
ಕರಿರಾಜ ಎಷ್ಟು ಕನಕವ ಕೊಟ್ಟನೋ ಹರಿಯೆ      ||೨||

ಅಜಮಿಳನು ಅಣ್ಣನೆ ವಿಭೀಷಣನು ತಮ್ಮನೇ
ನಿಜದಿ ರುಕ್ಮಾಂಗದನು ನಿನ್ನ ಮೊಮ್ಮಗನೆ
ಭಜನೆಗೆ ಅವರೇ ಹಿತರೆ ನಾ ನಿನಗೆ ಅನ್ಯನೇ
ತ್ರಿಜಗಪತಿ ಸಲಹೆನ್ನ ಪುರಂದರವಿಠಲ              ||೩||

Labels: ಯಾಕೆ ನಿರ್ದಯನಾದೆ ಎಲೊ ದೇವನೆ, Yake Nirdayanade Elo Devane
, ಪುರಂದರದಾಸರು, Purandaradasaru

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ